ಜಿಪಂ ಅಡಿ ಬರುವ ವಿವಿಧ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಇದ್ದರೂ ಯಾವುದೇ ಲೋಪಗಳಿಗೆ ಅವಕಾಶ ಕಲ್ಪಿಸಿಕೊಡದೆ ಆಡಳಿತದಲ್ಲಿ ಪಾರದರ್ಶಕತೆ ಉಳಿಸಿಕೊಂಡು ಜನರಿಗೆ ಉತ್ತಮ ಸೇವೆ ಕಲ್ಪಿಸಲು ಪ್ರಥಮ ಆದ್ಯತೆ ನೀಡಲಾಗುತ್ತಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಹೇಳಿದರು. ನಗರದ ಜಿಪಂ ಕಚೇರಿಯಲ್ಲಿ ಶನಿವಾರ ಮಧ್ಯಾಹ್ನ 2ಕ್ಕೆ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಎಲ್ಲ ಗ್ರಾಪಂ, ತಾಪಂ ಸಿಬ್ಬಂದಿ ಕೊರತೆ ಇದೆ. ಆದರೆ, ಆಗಬೇಕಾದ ಕೆಲಸಗಳನ್ನು ಕೈಬಿಡಬಾರದು ಎಂದು ಸಿಬ್ಬಂದಿಗಳಿಗೆ ತಿಳಿಸಲಾಗಿದೆ ಎಂದರು.