ತುಮಕೂರು ಜೂನಿಯರ್ ಕಾಲೇಜು ಮೈದಾನದಲ್ಲಿ ತುಮಕೂರು ದಸರಾ ಅಂಗವಾಗಿ ವಸ್ತುಪ್ರದರ್ಶನ ಸ್ಟಾಲ್ ಗಳ ನಿರ್ಮಾಣದ ಸ್ಥಳಗಳನ್ನ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಪರಿಶೀಲನೆ ನಡೆಸಿದರು. ಶುಕ್ರವಾರ ಸಂಜೆ 6 ರ ಸಮಯದಲ್ಲಿ ಅವರು ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಭೇಟಿ ನೀಡಿದ್ದರು.ಕಳೆದ ಭಾರೀಯಂತೆ ಈ ಭಾರಿಯು ವಸ್ತು ಪ್ರದರ್ಶನಕ್ಕೆ ಜಿಲ್ಲಾಡಳಿತ ಹೆಚ್ಚು ಪ್ರಾಮುಖ್ಯತೆ ನೀಡಲಿದೆ. ಹೀಗಾಗಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯತ್ ಸಿಇಒ ಜಿ. ಪ್ರಭು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ. ವಿ. ಅಶೋಕ್ ಅವರು ಸ್ಥಳ ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳಿಗೆ ವಿಜ್ಞಾನದ ಅರಿವು ಹೆಚ್ಚಿಸಲು ಇಸ್ರೋ, ಹೆಚ್ ಎ. ಎಲ್ ಮಳಿಗೆಗಳು ಪ್ರಮುಖ ಆಕರ್ಷಣೆಯಾಗಲಿದೆ.