ಯಲ್ಲಾಪುರ: ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆದ ಅಪಪ್ರಚಾರದ ಷಡ್ಯಂತ್ರದ ಬಗ್ಗೆಯೂ ಎಸ್.ಐ.ಟಿ ತನಿಖೆಯಾಗಬೇಕು ಎಂದು ಆಗ್ರಹಿಸಿ ಬಿಜೆಪಿಮಂಡಲ ವತಿಯಿಂದ ಸೋಮವಾರ ಗ್ರಾಮದೇವಿ ದೇವಸ್ಥಾನದಿಂದ ತಹಶಿಲ್ದಾರ ಕಛೇರಿಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ತಹಸೀಲ್ದಾರ್ ಚಂದ್ರಶೇಖರ ಹೊಸಮನಿ ಅವರಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಮಾತನಾಡಿದರು.