ಮೊಳಕಾಲ್ಮುರು:-ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸೋಮವಾರ ತಾಲೂಕಿನ ಬಿ.ಜಿ.ಕೆರೆ ಬೆಸ್ಕಾಂ ಕಚೇರಿ ಆವರಣದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು. ಸಂಘದ ರಾಜ್ಯ ಉಪಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ಮಾತನಾಡಿ, ತಾಲೂಕಿನಲ್ಲಿ ಸಾವಿರಾರು ರೈತ ಕುಟುಂಬಗಳು ತೋಟದ ಮನೆಗಳಲ್ಲಿ ವಾಸಿಸುತ್ತಿದ್ದಾರೆ. ಬೆಸ್ಕಾಂ ಇಲಾಖೆಯು ಪಂಪ್ ಸೆಟ್ ಲೈನ್‌ಗಳಿಗೆ ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆವರೆಗೂ ನೀಡುತ್ತಿದ್ದ ವಿದ್ಯುತ್ತನ್ನು ಸಿಂಗಲ್ ಫೇಸ್‌ಗೆ ಕಡಿತಗೊಳಿಸಿದ ಕಾರಣ ಈ ಕುಟುಂಬಗಳ ಮಕ್ಕಳ ವಿದ್ಯಾಬ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದರು.