ಮೊಳಕಾಲ್ಮುರು:- ದೇವಸಮುದ್ರ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ರಾಂಪುರ ವಲಯ ಮಟ್ಟದ ಪ್ರೌಢಶಾಲೆಗಳ ಕ್ರೀಡಾಕೂಟ ನಡೆಯಿತು. ಶಿಕ್ಷಣ ಇಲಾಖೆ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಕ್ರೀಡಾಕೂಟ ಹಮ್ಮಿಕೊಳ್ಳಲಾಗಿತ್ತು, ಕ್ರೀಡಾಕೂಟಕ್ಕೆ ರಾಂಪುರ ಭಾಗದ ಪ್ರೌಢ ಶಾಲೆಗಳ ವಿದ್ಯಾರ್ಥಿಗಳು ಆಗಮಿಸಿ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳಲ್ಲಿ ಅತ್ಯಂತ ಉತ್ಸಾಹದಿಂದ ಭಾಗಿಯಾದರು. ಕ್ರೀಡಾಕೂಟದಲ್ಲಿ ಮಾಜಿ ತಾಪಂ ಅಧ್ಯಕ್ಷರಾದ ಎಂಡಿ ಮಂಜುನಾಥ ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಎನ್ ವೈ ಚೇತನ್ ಗ್ರಾಮ ಪಂಚಾಯತಿ ಸದಸ್ಯರಾದ ಕುಮಾರಸ್ವಾಮಿ ಸೇರಿದಂತೆ ಹಲವರಿದ್ದರು.