ವಾಲ್ಮೀಕಿ ರವರ ಆದರ್ಶಗಳಿಂದ ನಡೆದರೆ ಉತ್ತಮ ಸಮಾಜ ನಿರ್ಮಿಸಲು ಸಾಧ್ಯ :ಆರಿಕುಂಟೆಯಲ್ಲಿ ಸರ್ವೇಶ್ ವಾಲ್ಮೀಕಿ ಜಯಂತಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಬಹಳ ಅದ್ದೂರಿಯಾಗಿ ಸಂಭ್ರಮ ಸಡಗರದಿಂದ ತಾಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿಯೂ ಆಚರಣೆ ಮಾಡಲಾಗುತ್ತಿದೆ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಣಾಧಿಕಾರಿ ಸರ್ವೇಶ್ ತಿಳಿಸಿದ್ದಾರೆ. ಶ್ರೀನಿವಾಸಪುರ ತಾಲೂಕಿನ ಆರಿಕುಂಟೆ ಗ್ರಾಮ ಪಂಚಾಯತಿಯಲ್ಲಿ ಕನ್ನಡದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಂಗಳವಾರ ಮಧ್ಯಾಹ್ನ 12 ಗಂಟೆಯಲ್ಲಿ ಭಾಗಿಯಾಗಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ತಾಲೂಕು ಪಂಚಾಯಿತಿ