ಹಾಸನ: ಹಾಸನ ಜಿಲ್ಲೆಯ ಹೇಮಾವತಿ ಮುಳುಗಡೆ ಸಂತ್ರಸ್ತರ ಜಮೀನಿಗೆ ಪೋಡಿ ಮಾಡಿ ಖಾತೆ ಮಾಡಿಕೊಡಬೇಕೆಂದು ಆಗ್ರಹಿಸಿ ಸಂತ್ರಸ್ತರು ಇಂದು ಪ್ರತಿಭಟನೆ ನಡೆಸಿದರು. ನೂರಾರು ಸಂಖ್ಯೆಯ ಹೇಮಾವತಿ ಜಲಾಶಯಕ್ಕೆ ಭೂಮಿ ಕಳೆದುಕೊಂಡ ರೈತರು ಡಿಸಿ ಕಚೇರಿ ಎದ್ರು ಜಮಾಯಿಸಿ ಹಲವು ವರ್ಷಗಳಿಂದ ಹೋರಾಟ ನಡೆಯುತ್ತಿದ್ದರು ಕಣ್ಣು ಕಾಣದಂತೆ ಕಿವಿ ಕೇಳದಂತೆ ಇರುವ ಅಧಿಕಾರಿಗಳ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ನಾವು ಕೂಲಿ ಕೆಲಸ ಬಿಟ್ಟು ಪ್ರತಿದಿನ ಜಿಲ್ಲಾಡಳಿತದ ಮುಂದೆ ಅಲೆಯುವ ಪರಿಸ್ಥಿತಿ ಎದುರಾಗಿದೆ ಹತ್ತಾರು ವರ್ಷಗಳಿಂದ ನಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ ಪ್ರತಿಭಟನೆ ನಡೆಸಿದರು ಸರ್ಕಾರ ಹಾಗು ಜಿಲ್ಲಾಡಳಿತ ಕಣ್ಣುಮುಚ್ಚಿಕೊಳ್ಳುತ್ತಿರುವುದು ಸರಿಯಲ್ಲ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದರು