Download Now Banner

This browser does not support the video element.

ದಾಂಡೇಲಿ: ತಾಲ್ಲೂಕು ಆಡಳಿತ ಸೌಧದ ಸಭಾ ಭವನದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮಾಸಿಕ ಪ್ರಗತಿ ಪರಿಶೀಲನಾ ಸಭೆ

Dandeli, Uttara Kannada | Aug 22, 2025
ದಾಂಡೇಲಿ : ನಗರದ ಅಂಬೇವಾಡಿಯಲ್ಲಿರುವ ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲ್ಲೂಕು ಅಧ್ಯಕ್ಷ ರಿಯಾಜ್ ಬಾಬು ಸೈಯದ್ ಅವರ ಅಧ್ಯಕ್ಷತೆಯಲ್ಲಿ ಇಂದು ಶುಕ್ರವಾರ ಸಂಜೆ 4:00 ಗಂಟೆ ಸುಮಾರಿಗೆ ಜರುಗಿತು. ಸಭೆಯಲ್ಲಿ ದಾಂಡೇಲಿ ತಾಲೂಕಿನಲ್ಲಿ ಪಂಚ ಗ್ಯಾರಂಟಿ ಯೋಜನೆಯ ಅನುಷ್ಠಾನದ ಕುರಿತಂತೆ ವಿಸ್ತೃತವಾಗಿ ಚರ್ಚೆ ನಡೆಸಲಾಯಿತು. ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಂದ ರಿಯಾಜ್ ಬಾಬು ಸೈಯದ್ ಅವರು ಮಾಹಿತಿಯನ್ನು ಪಡೆದುಕೊಂಡರು.
Read More News
T & CPrivacy PolicyContact Us