ಶಿವಮೊಗ್ಗ ತಾಲೂಕಿನ ಸಿದ್ದರಹಳ್ಳಿಯಲ್ಲಿ ಯುವಕನೋರ್ವ ಆತ್ಮಹತ್ಯೆ ಶರಣಾಗಿದ್ದಾನೆ. ಸಿದ್ದರಹಳ್ಳಿಯಲ್ಲಿ ಮನೆಯೊಂದರಲ್ಲಿ ನೇಣುಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನ ನವೀನ (26) ಎಂದು ಗುರುತಿಸಲಾಗಿದೆ. ಆತನ ಆತ್ಮಹತ್ಯೆಗೆ ಪ್ರೀತಿಯ ಹಿನ್ನಲೆಯಿದೆ ಎಂದು ಹೇಳಲಾಗ್ತಿದೆ. ನವೀನ ಪ್ಲಂಬಿಂಗ್ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದ. ಭಾನುವಾರ ಬೆಳಗ್ಗೆ 8 ಗಂಟೆಗೆ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಈ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.