ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಶನಿವಾರ ಮಧ್ಯಾಹ್ನ 3ಗಂಟೆ ಸುಮಾರಿಗೆ ವಿದ್ಯಾರ್ಥಿಗಳಿಗಾಗಿ ತೆರೆದ ಮನೆ ಕಾರ್ಯಕ್ರಮ ಆಯೋಜನೆ ಮಾಡಲಾಯಿತು. ವಿದ್ಯಾರ್ಥಿಗಳಿಗೆ ಕಾನೂನು ವ್ಯವಸ್ಥೆ ಹಾಗೂ ಅಪರಾಧ ಚಟುವಟಿಕೆಯಿಂದ ದೂರವಿರಲು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ನೀಡಿದರು. ಬಾಲ್ಯ ವಿವಾಹ ಬಾಲಕಾರ್ಮಿಕ ಅನಿಷ್ಟ ಪದ್ಧತಿಗಳ ಕುರಿತು ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಪಟ್ಟಣದ ವಿವಿಧ ಶಾಲೆಯ ವಿದ್ಯಾರ್ಥಿಗಳು ಪೊಲೀಸ್ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.