ಹುಬ್ಬಳ್ಳಿ ನೇಹಾ ಹಿರೇಮಠ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕ ಫಯಾಜ್ ಹೈಕೋರ್ಟಗೆ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಧಾರವಾಡ ಹೈಕೋರ್ಟ್ ಪೀಠ ವಜಾ ಮಾಡಿದೆ. ಕಳೆದ ಆಗಸ್ಟ್ 6 ರಂದು ಹುಬ್ಬಳ್ಳಿ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಹಂತಕ ಫಯಾಜ್ ಸಲ್ಲಿಸಿದ ಜಾಮೀನು ಅರ್ಜಿ ತಿರಸ್ಕೃತಗೊಂಡ ಬೆನ್ನಲ್ಲೇ ಫಯಾಜ್ ಪರ ವಕೀಲರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು ಈಗ ಹೈಕೋರ್ಟ್ ಸಹ ಹಂತಕನ ಜಾಮೀನು ಅರ್ಜಿಯನ್ನು ವಜಾ ಗೊಳಿಸಿದೆ.