ಹಾವೇರಿ ಜಿಲ್ಲೆ ಶಿಗ್ಗಾಂವ್ ಸವಣೂರು ವಿಧಾನಸಭಾ ಕ್ಷೇತ್ರಕ್ಕೆ ಸಚಿವ ಸಂಪುಟ ಗುರುವಾರ ೩೫೧ ಕೋಟಿ ರೂಪಾಯಿ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಸಮ್ಮತಿಸಿದೆ. ಸಚಿವ ಸಂಪುಟದ ನಿರ್ಧಾರಕ್ಕೆ ಶಿಗ್ಗಾಂವ್ ಸವಣೂರು ವಿಧಾನಸಭಾ ಕ್ಷೇತ್ರದ ಶಾದಕ ಯಾಸೀರ್ ಖಾನ್ ಪಠಾಣ್ ಅಭಿನಂದನೆ ಸಲ್ಲಿಸಿದ್ದಾರೆ ಈ ಯೋಜನೆಗಳ ಅನುಷ್ಠಾನದಿಂದ ಶಿಗ್ಗಾಂವ್, ಬಂಕಾಪುರ ಮತ್ತು ಸವಣೂರು ಪಟ್ಟಣಗಳ ಕುಡಿಯುವ ನೀರಿನ ಸಮಸ್ಯಗೆ ಶಾಶ್ವತ ಪರಿಹಾರ ಸಿಗಲಿದೆ ಎಂದು ಪಠಾಣ್ ತಿಳಿಸಿದ್ದಾರೆ.