ಮನೆಯ ಬಾಗಿಲಿಗೆ ಹಾಕಿದ್ದ ಬೀಗವನ್ನು ಒಡೆದು ಒಳ ನುಗ್ಗಿರುವ ಕಳ್ಳರು ಸುಮಾರು 59 ಸಾವಿರ ರೂಪಾಯಿ ಕಿಮ್ಮತ್ತಿನ ಬೆಲೆಬಾಳುವ ಚಿನ್ನಾಭರಣ ಕಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ತಾಲೂಕಿನ ಕದರಮಂಡಲಗಿ ಗ್ರಾಮದಲ್ಲಿ ನಡೆದಿದೆ. ಬಸವರಾಜ ಮಹೇಶ ನಾಯ್ಕರ್ ಎಂಬುವವರ ಮನೆಯಲ್ಲಿ ಈ ಘಟನೆ ಸಂಭವಿಸಿದೆ. ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.