ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬೂದನೂರ ಗ್ರಾಮದಲ್ಲಿ ಸರ್ಕಾರಿ ಶಾಲೆಯನ್ನು ಉಳಿಸುವಂತೆ ಸಾರ್ವಜನಿಕರು ಕೈಯಲ್ಲಿ ಭಿತ್ತಿ ಪತ್ರಗಳ ಹಿಡಿದು ಗುರುವಾರ ಬೆಳಗ್ಗೆ ಮೌನ ಪ್ರತಿಭಟನೆ ನಡೆಸಿದರು. ಶಾಲೆಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಬೇಕು ಶಿಕ್ಷಕರ ಕೊರತೆ ನೀಗಿಸಬೇಕು ಎನ್ನುವುದು ಸೇರಿದಂತೆ ಹಲವು ಬೇಡಿಕೆಗಳು ಸರ್ಕಾರ ಈಡೇರಿಸುವಂತೆ ಆಗ್ರಹಿಸಿ ಗ್ರಾಮದ ಯುವಕರು ಕೈಯಲ್ಲಿ ಭಿತ್ತಿ ಪತ್ರಗಳನ್ನು ಹಿಡಿದು ಸಾಲಾಗಿನಿಂತು ಮೌನ ಪ್ರತಿಭಟನೆ ಮೂಲಕ ಸರಕಾರಕ್ಕೆ ಒತ್ತಾಯಿಸಿದರು.