ಐತಿಹಾಸಿಕ ಕೋಟೆ ಪ್ರದೇಶವನ್ನು ಸ್ವಚ್ಛಗೊಳಿಸುವ ಮಹತ್ವದ ಕಾರ್ಯವನ್ನು ಮಹಾನಗರ ಪಾಲಿಕೆ ಕೈಗೊಂಡಿದ್ದು, ಸೆ.4 ರ ಗುರುವಾರ ಮಧ್ಯಾಹ್ನ 1 ಗಂಟೆಗೆ ಕೋಟೆ ಪ್ರದೇಶದ ಅಭಿವೃದ್ಧಿಯ ನಿಟ್ಟಿನಲ್ಲಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಕೇಂದ್ರ ಬಸ್ ನಿಲ್ದಾಣದ ಬಳಿ, ಕೋಟೆ ಜೆಸ್ಕಾಂ ಕಚೇರಿಗೆ ಹೊಂದಿಕೊಂಡಿರುವ ಪ್ರದೇಶ ಇದೀಗ ಸ್ವಚ್ಛತೆಯಿಂದ ಕಂಗೊಳಿಸುತ್ತಿದೆ . ಕೋಟೆಯ ಕಂದಕಗಳಲ್ಲಿನ ರಾಜಕಾಲುವೆಗಳನ್ನು ಈಗಾಗಲೇ ಸ್ವಚ್ಛಗೊಳಿಸಲಾಗಿದೆ. ಮಹಾನಗರ ಪಾಲಿಕೆಯ ಈ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ.