ಸೆ.14ರ ಭಾನುವಾರ ನಗರದಲ್ಲಿ ಹಿಂದೂ ಮಹಾ ಗಣಪತಿಯ ವಿಸರ್ಜನಾ ಮೆರವಣಿಗೆಯ ಬೃಹತ್ ಶೋಭಾಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಮಹಾಗಣಪತಿಯ ಉತ್ಸವ ಸಮಿತಿ ಅಧ್ಯಕ್ಷ ಸುರೇಶ್ ಪೈಲ್ವಾನ್ ಚಂದಾಪುರ್ ಹೇಳಿದರು. ದಾವಣಗೆರೆ ಜಿಲ್ಲೆಯ ಹರಿಹರ ನಗರದ ಹಿಂದೂ ಮಹಾ ಗಣಪತಿಯ ಪ್ರತಿಷ್ಠಾಪನೆಯ ಜೈ ಜವಾನ್ ಜೈ ಕಿಸಾನ್ ಮಹಾ ಮಂಟ್ಟಪದಲ್ಲಿ ಗುರುವಾರ ಸಂಜೆ 5 ಗಂಡೆಗೆ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಪೇಟೆ ಅಂಜನೇಯ ದೇವಸ್ಥಾನ ಆವರಣದಿಂದ ಮಧ್ಯಾಹ್ನ 2 ಗಂಟೆಯಿಂದ ಆರಂಭವಾಗುವ ಶೋಭಾಯಾತ್ರೆಯಲ್ಲಿ ಸುಮಾರು ಐವತ್ತು ಸಾವಿರಕ್ಕು ಅಧಿಕ ಜನರು ಆಗಮಿಸುವ ನೀರಿಕ್ಷೆಯಿದೆ ಎಂದರು.