ಹುಬ್ಬಳ್ಳಿಯ ತಾಲ್ಲೂಕು ಆಡಳಿತ ಸಭಾಭವನದಲ್ಲಿ ಜರುಗಿದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಶಾಸಕರಾದ ಮಹೇಶ್ ಟೆಂಗಿನಕಾಯಿ ಅವರು ಉದ್ಘಾಟಿಸಿದರು. ಸಮಾಜದಲ್ಲಿರುವ ಅಸಮಾನತೆಯನ್ನು ನಿವಾರಿಸಿ, ಸಾಮಾಜಿಕ ನ್ಯಾಯದ ಸಮಸಮಾಜ ನಿರ್ಮಾಣಕ್ಕೆ ಮುನ್ನುಡಿ ಬರೆದ ಶ್ರೀ ನಾರಾಯಣ ಗುರುಗಳು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಸಾಗೋಣ. ಅವರು ಕಂಡ ಕನಸುಗಳನ್ನು ನಾವೆಲ್ಲರೂ ಕಾರ್ಯರೂಪಕ್ಕೆ ತರಲು ಶ್ರಮಿಸೋಣ ಎಂದರು.ಈ ಸಂದರ್ಭದಲ್ಲಿ ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ಇತರರು ಉಪಸ್ಥಿತರಿದ್ದರು.