ನಗರದ ಬಳ್ಳಾರಿ ರಸ್ತೆಯಲ್ಲಿ ಶುಕ್ರವಾರ ರಸ್ತೆ ಅಗಲೀಕರಣ ಜಾಗಕ್ಕೆ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ಅಧ್ಯಕ್ಷ,ಶಾಸಕ ಟಿ.ರಘುಮೂರ್ತಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳ್ಳಾರಿ ರಸ್ತೆಯಲ್ಲಿ ಅಗಲೀಕರಣ ಮಾಡುವ ಹಿನ್ನಲೆಯಿಂದ ನಗರಸಭೆ ಅಧಿಕಾರಿಗಳೊಂದಿಗೆ ಭೇಟಿ ನೀಡಿದ ಶಾಸಕರು ರಸ್ತೆ ಅಗಲೀಕರಣದ ಬಗ್ಗೆ ಪರಿಶೀಲನೆ ಮಾಡಿದರು. ಈ ವೇಳೆ ನಗರಸಭೆ ಅಧ್ಯಕ್ಷೆ ಶಿಲ್ಪಾ, ನಗರಸಭೆ ಅಧಿಕಾರಿಗಳಾದ ಲೋಕೇಶ್ ಸೇರಿದಂತೆ ಮುಂತಾದವರು ಇದ್ದರು.