ಯಾದಗಿರಿ ಜಿಲ್ಲೆಯ ವಡಿಗೇರ ತಾಲೂಕಿನ ನಾಯ್ಕಲ್ ಗ್ರಾಮದಲ್ಲಿ ಬುಧವಾರ ಮಧ್ಯಾನ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸುತ್ತಿರುವ ಸ್ಥಳಕ್ಕೆ ಯಾದಗಿರಿಯ ಜಿಲ್ಲಾಧಿಕಾರಿಗಳಾದ ಹರ್ಷಲ್ ಭೋಯರ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಮೀಕ್ಷೆಯಲ್ಲಿ ಭಾಗವಹಿಸಿದ ಸಿಬ್ಬಂದಿಗಳು ಮನೆಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಣೆಯನ್ನು ವೀಕ್ಷಿಸಿದ್ದಾರೆ ಜೊತೆಗೆ ಕುಟುಂಬಸ್ಥರಿಗೂ ಕೂಡ ಸಲಹೆ ನೀಡಿ,ಸಮೀಕ್ಷೆಗೆ ಬಂದ ಸಿಬ್ಬಂದಿಗಳಿಗೆ ಸರಿಯಾದ ಮಾಹಿತಿಯನ್ನ ನೀಡುವಂತೆ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ವಡಿಗೇರ ತಾ.ಪಂ ಇಓ ಮಲ್ಲಿಕಾರ್ಜುನ ಸಂಗ್ವಾರ ಸೇರಿದಂತೆ ಅನೇಕರು ಭಾಗವಹಿಸಿದ್ದರು.