ತಾಲೂಕಿನ ಹೊಸೂರು ಗ್ರಾಮದಲ್ಲಿ ಸತ್ತವರ ಶವಸಂಸ್ಕಾರಕ್ಕೆ ಸ್ಥಳವಿಲ್ಲದ ಪರದಾಡಿದ ಗ್ರಾಮಸ್ಥರು ಸತ್ತ ವ್ಯಕ್ತಿಯ ಶವ ಇಟ್ಟು ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ಇಂದು ನಡೆದಿದೆ. ದೇವರಸನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸೂರು ಗ್ರಾಮದಲ್ಲಿದ್ದ ಸ್ಮಶಾನವನ್ನು ಆಕ್ರಮಿಸಿಕೊಂಡು ಶವ ಸಂಸ್ಕಾರಕ್ಕೆ ಜಾಗವಿಲ್ಲದೆ ಸಮಸ್ಯೆ ಎದುರಾಗಿದೆ. ಒತ್ತುವರಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಗ್ರಾಮಸ್ಥರು ಒತ್ತಾಯಿಸುತ್ತಾ ಬಂದಿದ್ದರೂ ತಾಲೂಕು ಆಡಳಿತ ಅದಕ್ಕೆ ಸ್ಪಂದಿಸಿಲ್ಲ.