ಬುಧವಾರ ಸಂಜೆ 6 ಗಂಟೆ ಸುಮಾರಿಗೆ ವಿಕಾಸಸೌಧದಲ್ಲಿ ಸಚಿವ ಈಶ್ವರ್ ಖಂಡ್ರೆ ಅವರನ್ನ ನಿರ್ಮಾಪಕ ಕೆ.ಮಂಜು ನಿಯೋಗ ಭೇಟಿಯಾಗಿ, ಅಭಿಮಾನ್ ಸ್ಟುಡಿಯೋದಲ್ಲಿನ ವಿಷ್ಣುವರ್ಧನ್ ಸಮಾಧಿಗೆ ಪೂಜೆ ಮಾಡಲು ಅವಕಾಶ ನೀಡುವಂತೆ ಕೆ. ಮಂಜು ನಿಯೋಗ ಮನವಿ ಮಾಡಿದರು. ಈ ಬಗ್ಗೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಸಚಿವರು, ನಾಳೆ ಸಂಪುಟ ಸಭೆಯಲ್ಲಿ ಚರ್ಚೆ ಮಾಡುವುದಾಗಿ ಭರವಸೆ ನೀಡಿದರು. ಅಭಿಮಾನ್ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಸ್ಮಾರಕಕ್ಕೆ 15 ಗುಂಟೆ ಜಮೀನು ನೀಡುವಂತೆಯೂ ಮನವಿ ಮಾಡಲಾಗಿದ್ದು, ಈ ಬಗ್ಗೆ ಸಿಎಂ ಜೊತೆ ಚರ್ಚಿಸುವುದಾಗಿ ಸಚಿವರ ಭರವಸೆ ನೀಡಿದರು.