ವರದಾ–ಬೇಡ್ತಿ ನದಿಗಳ ಜೋಡಣೆ ವಿಚಾರದಲ್ಲಿ ಕೇಂದ್ರ ಸರ್ಕಾರದ ತಾತ್ವಿಕ ಒಪ್ಪಿಗೆ ನೀಡಿದೆ’ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ತುಂಗಭದ್ರಾ ನದಿಯಲ್ಲಿ ಬೇಸಿಗೆಯ 3–4 ತಿಂಗಳಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗುತ್ತದೆ. ಅದಕ್ಕೆ ವರದಾ–ಬೇಡ್ತಿ ನದಿಯ ಜೋಡಣೆ ಅಗತ್ಯವಿದೆ’ ಎಂದರು. ‘ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ತಾತ್ವಿಕ ಒಪ್ಪಿಗೆ ಕೊಟ್ಟಿದ್ದು, ರಾಜ್ಯ ಸರ್ಕಾರ ಈ ಪ್ರಕ್ರಿಯೆನ್ನು ಮುಂದಕ್ಕೆ ತೆಗೆದುಕೊಂಡು ಹೋಗಬೇಕು. ನನ್ನ ಈ ಆಗ್ರಹವನ್ನು ರಾಜ್ಯ ಸರ್ಕಾರ ಸಹ ಒಪ್ಪಿಕೊಂಡಿದೆ. ಯೋಜನೆ ಜಾರಿಯಾದರೆ ಸುಮಾರು 18 ಟಿಎಂಸಿ ನೀರು ಬರುತ್ತದೆ. ಅದರಿಂದ ನೀರಿನ ಸಮಸ್ಯೆ ನಿವಾರಣೆಯಾಗಲಿದೆ ಎಂದರು.