ವಿಜಯಪುರ ಜಿಲ್ಲೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕು, ಪಿಪಿಪಿ (ಪಬ್ಲಿಕ್, ಪ್ರೈವೇಟ್, ಪಾರ್ಟ್‌ನರ್‌ಶಿಪ್) ಮಾದರಿಯಲ್ಲಿ ವೈದ್ಯಕೀಯ ಕಾಲೇಜನ್ನು ಕೈ ಬಿಡುವಂತೆ ಆಗ್ರಹಿಸಿ ವಿಜಯಪುರ ನಗರದಲ್ಲಿ ಎಬಿವಿಪಿ ಕಾರ್ಯಕರ್ತರು ಮಂಗಳವಾರ ಮಧ್ಯಾನ 2ಗಂಟೆ ಸುಮಾರಿಗೆ ಬೃಹತ್ ಪ್ರತಿಭಟನೆ ಮಾಡಿದರು. ಇನ್ನು ಪ್ರತಿಭಟನೆ ಹಿನ್ನೆಲೆ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಎಬಿವಿಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಈ ಸಂದರ್ಭದಲ್ಲಿ ಎಬಿವಿಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ದಿಕ್ಕಾರ ಹೋಗಿದ್ದರು.