ರಾಯಚೂರು ತಾಲೂಕಿನ ಇಡಪನೂರ ಪೊಲೀಸ್ ಠಾಣೆಯ ಮಹಿಳಾ ಪಿಎಸ್ಐ ಒಬ್ಬರು ಪ್ರಕರಣ ಒಂದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಲಂಚದ ಹಣ ಕೇಳಿದ್ದಾರೆ ಎನ್ನುವ ಆರೋಪದ ಕುರಿತು ಆಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಶುಕ್ರವಾರ ಆಡಿಯೋ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತುಕೊಂಡಿರುವ ರಾಯಚೂರು ಜಿಲ್ಲಾ ಪೊಲೀಸ್ ವರಿಷ್ಠ ಅಧಿಕಾರಿ ಅವರು ಪಿ ಎಸ್ ಐ ಸೌಮ್ಯ ಅವರನ್ನು ಬಳ್ಳಾರಿಗೆ ವರ್ಗಾವಣೆ ಮಾಡಿದ್ದಾರೆ. ಸೌಮ್ಯ ಅವರ ಸ್ಥಳಕ್ಕೆ ರಾಯಚೂರು ಗ್ರಾಮೀಣ ಠಾಣೆಯ ಪಿಎಸ್ಐ ಶಾಂತಮ್ಮ ಅವರನ್ನುನಿಯೋಜಿಸಿ ಆದೇಶ ಹೊರಡಿಸಿದ್ದಾರೆ.