ಅವಿವಾಹಿತ ಮಹಿಳೆ ಮೇಲೆ ದೂರದ ಸಂಬಂಧಿ ಅತ್ಯಾಚಾರಕ್ಕೆ ಯತ್ನಿಸಿದ ಬಗ್ಗೆ ದೂರು ದಾಖಲಾದ ಕೆಲವೇ ಗಂಟೆಗಳಲ್ಲಿ ಆರೋಪಿಯನ್ನ ಬಂಧಿಸಿ ಜೈಲಿಗಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆಯಲ್ಲಿ ನಡೆದಿದೆ. ರಿಪ್ಪನ್ ಪೇಟೆ ಸಮೀಪದ ಬೆಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಳಸೆ ಗ್ರಾಮದ ೪೦ ವರ್ಷದ ಅವಿವಾಹಿತ ಮಹಿಳೆಯೊಬ್ಬರ ಮೇಲೆ ದೂರದ ಸಂಬಂಧಿ ಪ್ರಕಾಶ್ ಅತ್ಯಾಚಾರಕ್ಕೆ ಯತ್ನಿಸಿರುವ ಕುರಿತುರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಪೊಲೀಸರು ಆರೋಪಿ ಪ್ರಕಾಶ್ ನನ್ನು ಬಂಧಿಸಿದ್ದಾರೆ. ಈ ಕುರಿತಾದ ಮಾಹಿತಿ ಗುರುವಾರ ಲಭ್ಯವಾಗಿದೆ.