ಬೆಳಗಿನ ಜಾವ ಹಸುವಿನಲ್ಲಿ ಹಾಲು ಕರೆಯುತ್ತಿದ್ದ ಪತಿ ಪತ್ನಿ ಮೇಲೆ ದೊಣ್ಣೆಯಿಂದ ಹಲ್ಲೆ ಮಾಡಿ ಪತ್ನಿಯ ಕತ್ತಿನಲ್ಲಿದ್ದ 55 ಗ್ರಾಂ ತೂಕದ ಮಾಂಗಲ್ಯ ಸರವನ್ನ ಕಿತ್ತು ಪರಾರಿಯಾಗಿರುವ ಘಟನೆ ರಾಮನಗರ ತಾಲ್ಲೂಕಿನ ಜಕ್ಕನಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ರವಿಕುಮಾರ್ ತಲೆಗೆ ದೊಣ್ಣೆಯಿಂದ ಹೊಡೆದು ನಂತರ ಪತ್ನಿ ಶಾಂತಮ್ಮ ಮೇಲೆ ಹಲ್ಲೆ ಮಾಡಿ ಅವರ ಕತ್ತಿನಲ್ಲಿದ್ದ ಮಾಂಗಲ್ಯ ಸರವನ್ನ ಕಿತ್ತು ಪರಾರಿಯಾಗಿದ್ದಾರೆ. ಈ ಸಂಬಂಧ ಶುಕ್ರವಾರ ಶಾಂತಮ್ಮ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.