ದಾವಣಗೆರೆ ನಗರದಲ್ಲಿ ಪರವನಾಗಿ ಇಲ್ಲದೆ ಅನಧಿಕೃತವಾಗಿ ನಡೆಯುತ್ತಿದ್ದ ಆಸ್ಪತ್ರೆಗಳ ಮೇಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಗುರುವಾರ ಮಧ್ಯಾಹ್ನ 2 ಗಂಟೆಗೆ ದಿಢೀರ್ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿಗಳ ಸೂಚನೆ ಮೇರೆಗೆ ದಾವಣಗೆರೆ ನಗರದ ವಿವಿಧೆಡೆ ಪರವನಾಗಿ ಇಲ್ಲದೆ ತಲೆ ಎತ್ತಿದ್ದ 15 ಸ್ಕಿನ್ ಮತ್ತು ಹೇರ್ ಕ್ಲಿನಿಕ್ ಗಳ ಮೇಲೆ ತಾಲ್ಲೂಕು ಆರೋಗ್ಯ ಅಧಿಕಾರಿಗಳನ್ನು ಒಳಗೊಂಡ 15 ಪ್ರತ್ಯೇಕ ಆರೋಗ್ಯ ಅಧಿಕಾರಿಗಳ ತಂಡ ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಆಸ್ಪತ್ರೆಗಳಲ್ಲಿ ಪರವನಾಗಿ ಇಲ್ಲದೆ ಇರುವುದು, ವೈದ್ಯರೇ ಇಲ್ಲದೆ ಚಿಕಿತ್ಸೆ ನೀಡುತ್ತಿರುವುದು, ಅವಧಿ ಮೀರಿದ ಔಷಧಿಗಳು ಇರುವುದು ಕಂಡು ಅಧಿಕಾರಿಗಳು ತಾತ್ಕಾಲಿಕವಾಗಿ ಮುಚ್ಚುವಂತೆ ಸೂಚನೆ ನೀಡಿದರು.