ಶಿವಮೊಗ್ಗ ನಗರದ ಇತಿಹಾಸ ಪ್ರಸಿದ್ಧ ಹಿಂದೂ ಮಹಾಸಭಾ ಗಣಪತಿಯ ರಾಜಭೀದಿ ಉತ್ಸವ ಹಿನ್ನೆಲೆ ಜಿಲ್ಲಾ ಪೊಲೀಸ್ ಇಲಾಖೆ ಸಕಲ ಸಿದ್ಧತೆ ಕೈಗೊಂಡಿದೆ. ಭದ್ರತೆಗಾಗಿ ಐದು ಜನ ಎಸ್ಪಿ,ಎರಡು ಹೆಚ್ಚುವರಿ ಪೊಲೀಸ್ ಅಧೀಕ್ಷರು, 21 ಪೊಲೀಸ್ ಉಪಾಧ್ಯಕ್ಷಕರು, 58 ಪೊಲೀಸ್ ನಿರೀಕ್ಷಕರು, 263 ಪೊಲೀಸ್ ಉಪನಿರೀಕ್ಷಕರು, ಒಟ್ಟು ಐದು ಸಾವಿರಕ್ಕೂ ಹೆಚ್ಚು ಪೊಲೀಸರನ್ನ ಶಿವಮೊಗ್ಗ ನಗರದ ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.