ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಡಿ.ಎ.ಆರ್. ಕವಾಯತು ಮೈದಾನದಲ್ಲಿ ಭಾನುವಾರ ಸಂಜೆ 4 ಗಂಟೆಯಲ್ಲಿ 2025 ನೇ ಸಾಲಿನ ಗೌರಿ-ಗಣೇಶ ಹಾಗೂ ಈದ್-ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಯನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಅವರ ನೇತೃತ್ವದಲ್ಲಿ ಆಯೋಜಿಸಲಾಯಿತು. ಗಣೇಶ ಹಬ್ಬ ಹಾಗೂ ಈದ್-ಮಿಲಾದ್ ಹಬ್ಬವನ್ನು ಎಲ್ಲಾ ನಾಗರಿಕರು ಸೌಹಾರ್ಧಯುತವಾಗಿ ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಆಚರಿಸಲು ತಿಳಿಸಲಾಯಿತು ಇ ವೇಳೆ ಹಾಜರಿದ್ದ ಎಲ್ಲಾರಿಗೂ ಸಂವಿಧಾನದದ ಪೀಠಿಕೆಯನ್ನು ಬೋಧಿಸಲಾಯಿತು. ಸಭೆಯಲ್ಲಿ ಜಿಲ್ಲೆಯ ಪೊಲೀಸ್ ಅಧಿಕಾರಿಗಳು & ವಿವಿಧ ಕೋಮಿನ ಮುಖಂಡರುಗಳು ಭಾಗವಹಿಸಿದ್ದರು.