ಹಾಸನ:ಸಮಾಜಕ್ಕೆ ಉತ್ತಮ ನಾಗರಿಕನನ್ನು ನೀಡುವಲ್ಲಿ ಶಿಕ್ಷಕರ ಕೊಡುಗೆ ಅಪಾರವಾಗಿದೆ. ಇತ್ತೀಚಿನ ದಿನಗಳಲ್ಲಿ ಶಿಕ್ಷಕರು ಕೂಡ ಹಲವು ಸಮಸ್ಯೆಗಳಿಂದ ಬಳಲುತ್ತಿದ್ದು ಅವರ ಸಮಸ್ಯೆಗಳಿಗೆ ಕಿವಿಗೊಡುವ ಕೆಲಸವನ್ನು ಸರ್ಕಾರ ಮಾಡಬೇಕಿದೆ ಎಂದು ಶಾಸಕ ಸ್ವರೂಪ ಪ್ರಕಾಶ್ ಹೇಳಿದ್ದಾರೆ. ಹಾಸನ ಜಿಲ್ಲಾಡಳಿತದ ವತಿಯಿಂದ ನಗರದ ಹಾಸನಾಂಬ ಕಲಾ ಕ್ಷೇತ್ರದಲ್ಲಿ ಇಂದು ಆಯೋಜಿಸಲಾಗಿದ್ದ ಯುವಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಉಳಿವು ಶಿಕ್ಷಕರ ಸಮಸ್ಯೆಗಳಿಗೆ ಸ್ಪಂದಿಸಲು ತಾನು ಸದಾ ಸಿದ್ಧ. ಯಾವುದೇ ರೀತಿಯ ಸಮಸ್ಯೆಗಳು ಇದ್ದಲ್ಲಿ ತನ್ನ ಗಮನಕ್ಕೆ ತಂದರೆ ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ತಾನು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಹೇಳಿದರು.