ನಗರದಲ್ಲಿ ನಡೆಯುತ್ತಿರುವ ಸಿಂಧನೂರು ದಸರಾ ಉತ್ಸವ ಯುವ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹೆಸರಾಂತ ಗಾಯಕರಾದ ರಾಜೇಶ್ ಕೃಷ್ಣನ್ ಅವರು ಅಕ್ಟೋಬರ್ 1 ರಂದು ಬುಧವಾರ ಸಿಂಧನೂರಿಗೆ ಆಗಮಿಸಲಿದ್ದಾರೆ. ಅವರು ಮಾಧ್ಯಮ ಹೇಳಿಕೆ ನೀಡಿ, ಶಾಸಕ ಹಂಪನಗೌಡ ಬಾದರ್ಲಿ ನೇತೃತ್ವದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮದಲ್ಲಿ ನಾನು ಪಾಲ್ಗೊಳ್ಳುತ್ತೇನೆ. ಎಲ್ಲರೂ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ರಾಜೇಶ್ ಕೃಷ್ಣನ್ ಜೊತೆಗೆ ಇನ್ನಿತರ ಕಲಾವಿದರು ಯುವ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು ಎಂದು ಸಿಂಧನೂರು ದಸರಾ ಉತ್ಸವ ಸಮಿತಿ ಪ್ರಕಟಣೆಯಲ್ಲಿ ತಿಳಿಸಿದೆ.