ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಜೀವನ, ತತ್ವ, ಸಂದೇಶ ಕುರಿತು ಇಸ್ಲಾಂ ಧರ್ಮಿಯರಿಗೆ ಹಾಗೂ ಅನ್ಯ ಧರ್ಮಿಯರಿಗೆ ತಿಳಿವಳಿಕೆ ನೀಡುವ ಮತ್ತು ಜಾಗೃತಿ ಮೂಡಿಸುವ ಉದ್ದೇಶದಿಂದ ಸೆ.೩ ರಿಂದ ೧೪ ರ ವರೆಗೆ ರಾಜ್ಯಾದ್ಯಂತ ಸೀರತ್ ಅಭಿಯಾನ ಹಮ್ಮಿಕೊಳ್ಳಲಾಗಿದೆ ಎಂದು ಜಮಾಅತೆ ಇಸ್ಲಾಮಿ ಹಿಂದ್ ಜಿಲ್ಲಾ ಘಟಕದ ಅಧ್ಯಕ್ಷ ಮಹೆಬೂಬ ಅಲಿ ಬಳಗಾನೂರ ಮಂಗಳವಾರ ಸಾಯಂಕಾಲ 4ಗಂಟೆ ಸುಮಾರಿಗೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.ಪೈಗಂಬರ್ ಮತ್ತು ಇಸ್ಲಾಂ ಧರ್ಮದ ಬಗ್ಗೆ ತಪ್ಪು ಕಲ್ಪನೆಗಳು ಹರಡಲಾಗುತ್ತಿದೆ. ಇದರ ನಿವಾರಣೆಯಾಗಬೇಕು ಎಂಬ ಹಿನ್ನಲೆ ಈ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹೇಳಿದರು.