ಯಾದಗಿರಿ ನಗರದಲ್ಲಿ ಬೀಡಾಡಿ ದನಗಳ ಹಾವಳಿ ಹೆಚ್ಚಾಗಿತ್ತು ಇದರ ಕುರಿತು ಸಂಘ ಸಂಸ್ಥೆಗಳು ಸಾರ್ವಜನಿಕರು ಕೂಡ ನಗರಸಭೆಗೆ ಮನವಿ ಮಾಡಿ ಬಿಡಾಡಿ ದನಗಳ ತೆರವಿಗೆ ಆಗ್ರಹಿಸಿದ್ದರು. ಅದರಂತೆ ಮಂಗಳವಾರ ರಾತ್ರಿ ನಗರಸಭೆ ಪೌರಾಯುಕ್ತರು,ಪೊಲೀಸ್ ಅಧಿಕಾರಿಗಳು, ಪಶು ಸಂಗೋಪನಾ ಇಲಾಖೆ ಅಧಿಕಾರಿಗಳು ಸೇರಿದಂತೆ ಅನೇಕ ಸಿಬ್ಬಂದಿಗಳು ಭಾಗವಹಿಸಿ ತಡರಾತ್ರಿವರೆಗೆ ಕಾರ್ಯಾಚರಣೆ ನಡೆಸಿ ಬಿಡಾಡಿ ದನಗಳನ್ನು ಬೇರೆಡೆಗೆ ಸ್ಥಳಾಂತರಿಸುವ ಕಾರ್ಯ ಮಾಡಿದ್ದು, ಅಧಿಕಾರಿಗಳ ಕಾರ್ಯಕ್ಕೆ ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದಾರೆ.