ಡಾ.ಬಿ.ಆರ್ ಅಂಬೇಡ್ಕರ್ ಅವರ ಸಂವಿಧಾನದ ಆಶಯಗಳನ್ನು ಸಾಕಾರಗೊಳಿಸೋಣ ಎಂದು ಜಿ.ಪಂ ಮಾಜಿ ಸದಸ್ಯ ಕೆ.ಪಿ.ಪಾಲಯ್ಯ ಕರೆ ನೀಡಿದರು. ದಾವಣಗೆರೆ ಜಿಲ್ಲೆಯ ಜಗಳೂತು ತಾಲ್ಲೂಕಿನ ಭರಮ ಸಮುದ್ರ ಗ್ರಾಮದಲ್ಲಿ ಅಂಬೇಡ್ಕರ್ ಯುವಕ ಸಂಘದ ನೂತನ ನಾಮಫಲಕವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಅಂಬೇಡ್ಕರ್ ಸಂವಿಧಾನ ಬದ್ದ ಮೀಸಲಾತಿ ಹಕ್ಕಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದಡಿ ಎಡಗೈ ಮತ್ತು ಬಲಗೈ ಸಮುದಾಯಗಳಿಗೆ ಒಳಮೀಸಲಾತಿ ಜಾರಿಗೊಳಿಸಿದ್ದು ಇದರ ಸದ್ಬಳಕೆ ಮಾಡಿಕೊಂಡು ಶಿಕ್ಷಣ ಸಂಘಟನೆ ಹೊರಾಟದ ಮೂಲಕ ಸಮಾಜದಲ್ಲಿ ಮುಖ್ಯ ವಾಹಿನಿಗೆ ಬರಬೇಕು ಎಂದರು.