ಕಡಿಮೆ ಅವಧಿಯಲ್ಲಿ ರಾಬಕೊವಿ ಹಾಲು ಉತ್ಪಾದಕರ ಒಕ್ಕೂಟದ ವ್ಯಾಪ್ತಿಯ ನಾಲ್ಕು ಜಿಲ್ಲೆಗಳಲ್ಲಿ ಹೆಚ್ಚು ಹಾಲು ಉತ್ಪಾದಕರ ಸಹಕಾರ ಸಂಘಗಳ ರಚನೆ ಹಾಗೂ ಹಾಲು ಉತ್ಪಾದನೆಯನ್ನು ಹೆಚ್ಚಳ ಮಾಡಿದಕ್ಕಾಗಿ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿಯು ಪ್ರಶಸ್ತಿ ಘೋಷಣೆ ಮಾಡಿದ್ದು ರಬಕೋವಿ ಗೆ ಪ್ರಶಸ್ತಿ ಲಬಿಸಿದೆ. ಸೆಪ್ಟೆಂಬರ್ 11 ರಂದು ಮಧ್ಯಾಹ್ನ 1-30 ಗಂಟೆಗೆ ಪುದುಚೇರಿಯ ಮುಖ್ಯಮಂತ್ರಿ ಎನ್. ರಂಗಸ್ವಾಮಿ, ಪುದುಚೇರಿ ಗವರ್ನರ್ ಕೈಲಾಶ್ ನಾಥನ್,ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಡಾ. ಮೀನೇಶ್ ಶಾ ಅವರು ಪ್ರಶಸ್ತಿ ಪ್ರಧಾನ ಮಾಡಿದರು. ಪುದುಚೇರಿ ರಾಜ್ಯದಲ್ಲಿ ರಾಷ್ಟ್ರೀಯ ಡೈರಿ ಅಭಿವೃದ್ಧಿ ಮಂಡಳಿ ವತಿಯಿಂದ ಪುದುಚೇರಿ ಹಾಲು ಉತ್ಪಾದಕರ ಸಂಘದ ಸಹಭಾಗಿತ್ವದಲ್ಲಿ ನಡೆದ ವಜ್ರ ಮಹೋತ್ಸವ