ಪುಣ್ಯ ಕ್ಷೇತ್ರ ಧರ್ಮಸ್ಥಳದ ಮೇಲೆ ಕೆಟ್ಟ ಹೆಸರು ತರಲು ಕಾಂಗ್ರೆಸ್ ಸರ್ಕಾರದ ಯತ್ನವನ್ನು ನಾವು ಸಹಿಸುವುದಿಲ್ಲ ಎಂದು ಬಿಜೆಪಿ ಮುಖಂಡ ಕೃಷ್ಣಕುಮಾರ್ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. ಅವರು ಕುಣಿಗಲ್ ಪಟ್ಟಣದಲ್ಲಿ ಹಿಂದೂ ಪರ ಸಂಘಟನೆಗಳು ವಿವಿಧ ಸಂಘಟನೆಗಳು ಧರ್ಮಸ್ಥಳದ ಬಗ್ಗೆ ಅಪಪ್ರಚಾರ ನಡೆಸುತ್ತಿರುವವರ ಬಂಧನಕ್ಕೆ ಆಗ್ರಹಿಸಿ ನಡೆಸಿದ ಪ್ರತಿಭಟನೆ ನೇತೃತ್ವವಹಿಸಿ ಅವರು ಶನಿವಾರ ಮಧ್ಯಾಹ್ನ 1.30 ರ ಸಮಯದಲ್ಲಿ ಮಾತನಾಡಿದರು.ಇದಕ್ಕೂ ಮುನ್ನ ಪ್ರತಿಭಟನೆಕಾರರು ಗ್ರಾಮ ದೇವತೆ ದೇವಾಲಯ ವೃತ್ತದಿಂದ ತಾಲೂಕು ಕಚೇರಿ ವರೆಗೂ ಮೆರವಣಿಗೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.ಬಿಜೆಪಿ ಮುಖಂಡ ಬಲರಾಮ್ ಜೈನ, ಸಿರ್ವಿ, ಸಮಾಜದ ಮುಖಂಡರು ಭಾಗವಹಿಸಿದ್ದರು.