ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಬಿಜೆಪಿ ಎಂಎಲ್ ಸಿ ಸಿ.ಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಬುಧವಾರ ಮದ್ದೂರಿನಲ್ಲಿ ಆಕ್ಷೇಪಾರ್ಹ, ಪ್ರಚೋದನಕಾರಿ ಭಾಷಣ ಮಾಡಿದ ಹಿನ್ನೆಲೆ ಅವರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.ಮಂಡ್ಯ ಜಿಲ್ಲೆಯ ಮದ್ದೂರು ಠಾಣೆಯಲ್ಲಿ ಸಿಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ. ಪಿಎಸ್ ಐ ಮಂಜನಾಥ್ ದೂರು ಆಧರಿಸಿ ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ. ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಚನ್ನೇಗೌಡ ಬಡಾವಣೆಯಲ್ಲಿ ಕೂರಿಸಿದ್ದಂತ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಅನ್ಯ ಕೋಮಿನಿಂದ ಕಲ್ಲು ತೂರಾಟ ನಡೆಸಿರುವಂತ ಆರೋಪ ಕೇಳಿ ಬಂದಿದೆ.