ಹುಬ್ಬಳ್ಳಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ದುಷ್ಕರ್ಮಿಗಳು ಹಲ್ಲೆ ಮಾಡಿ ಪರಾರಿಯಾಗಿದ್ದು ಗಾಯಗೊಂಡ ಯುವಕನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಕಮಿಷನರ್ ಎನ್ ಶಶಿಕುಮಾರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು ಯುವಕ ಮೂತ್ರ ಮಾಡಲು ಹೋದ ಸಂದರ್ಭದಲ್ಲಿ ಯುವಕನ ಮೇಲೆ ಹಲ್ಲೆಯಾಗಿದ್ದು. ಯುವಕ ತೊಡೆ ಭಾಗ ಹಾಗೂ ಎದೆಯ ಕೆಲಭಾಗದಲ್ಲಿ ಗಾಯವಾಗಿದ್ದು ಯುವಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪೋಲೀಸ ಕಮಿಷನರ್ ಎನ್ ಶಶಿಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.