ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲ್ಲೂಕಿನ ಹನಮಸಾಗರ ಗ್ರಾಮದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅನುದಾನದಡಿಯಲ್ಲಿ ಹನಮಸಾಗರ ಪಟ್ಟಣದ ಬಸ್ ನಿಲ್ದಾಣದಿಂದ ಗಜೇಂದ್ರಗಡ ರಸ್ತೆಯ ವರಗೆ ಡಾಂಬರಿಕರಣ ಕಾಮಗಾರಿಯ ಭೂಮಿ ಪೂಜೆ ಇಂದು ನಡೆಯಿತು. ಆಗಸ್ಟ್ 28 ರಂದು ಮಧ್ಯಾಹ್ನ 1-30 ಗಂಟೆಗೆ ಕುಷ್ಟಗಿ ಶಾಸಕರು ಹಾಗೂ ವಿಧಾನ ಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರಾದ ದೊಡ್ಡನಗೌಡ ಪಾಟೀಲ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಪಕ್ಷದ ಕಾರ್ಯಕರ್ತರು ಅಧಿಕಾರಿಗಳು ಉಪಸ್ಥಿತರಿದ್ದರು