ಜಿಲ್ಲೆಯ ಬಗರ್‌ಹುಕುಂ ರೈತರ ಹೋರಾಟ 15ನೇ ದಿನವೂ ಮುಂದುವರಿದಿದ್ದು, ಬೇಡಿಕೆಗಳನ್ನು ಈಡೇರಿಸದ ಸರ್ಕಾರದ ವಿರೋಧವಾಗಿ ದಯಾಮರಣಕ್ಕೆ ಮನವಿ ಸಲ್ಲಿಸುವುದಾಗಿ ರೈತರು ಸೋಮವಾರ ನಿರ್ಧರಿಸಿದರು. ಜಿಲ್ಲಾಡಳಿತ ಭವನದ ಎದುರು 14 ದಿನಗಳಿಂದ ಉತ್ತರ ಕರ್ನಾಟಕ ಮಹಾಸಭಾ ನೇತೃತ್ವದಲ್ಲಿ ರೈತರು ಅಹೋರಾತ್ರಿ ಧರಣಿ ನಡೆಸುತ್ತಿದ್ದು, ಸೋಮವಾರ ನಡೆದ ರೈತರ ಸಭೆಯಲ್ಲಿ ಸರ್ಕಾರದ "ರೈತ ವಿರೋಧಿ ಧೋರಣೆ"ಗೆ ಖಂಡನೆ ವ್ಯಕ್ತಪಡಿಸಲಾಯಿತು.