ಶಿವಮೊಗ್ಗ ವಿಮಾನ ನಿಲ್ದಾಣದ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿದ್ದೇ ನಾನು ಮಾಡಿದ ದೊಡ್ಡ ತಪ್ಪು ಎಂದು ಸಂಸದ ಬಿ.ವೈ.ರಾಘವೇಂದ್ರ ಶಿವಮೊಗ್ಗದಲ್ಲಿ ಬೇಸರ ವ್ಯಕ್ತಪಡಿಸಿದ್ದಾರೆ. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ನಿನ್ನೆ ಶಿವಮೊಗ್ಗದಲ್ಲಿ ವಿಮಾನ ಲ್ಯಾಂಡ್ ಆಗದೆ ಹುಬ್ಬಳ್ಳಿಗೆ ತೆರಳಿತ್ತು. ಹುಬ್ಬಳ್ಳಿಯಿಂದ ರಸ್ತೆ ಮಾರ್ಗವಾಗಿ ಶಿವಮೊಗ್ಗಕ್ಕೆ ಬಂದೆ.ನಮ್ಮೂರಿನಲ್ಲಿ ವಿಮಾನ ನಿಲ್ದಾಣವಿದ್ದರೂ ಇನ್ನೊಂದು ಊರಿಗೆ ಹೋಗಿ ಬರುವಂತಹ ದುಸ್ಥಿತಿ ಇದೆ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ತಂದೆ ಮುಖ್ಯಮಂತ್ರಿ ಆಗಿದ್ದ ವೇಳೆ ವಿಮಾನ ನಿಲ್ದಾಣ ನಿರ್ವಹಣೆಯನ್ನು ರಾಜ್ಯ ಸರ್ಕಾರಕ್ಕೆ ವಹಿಸಿ ಬಿಟ್ಟೆ ಅದೇ ನಾನು ಮಾಡಿದ ದೊಡ್ಡ ತಪ್ಪು ಎಂದರು.