ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ದೊಡ್ಡಮಳ್ತೆ ಗ್ರಾಮದ ಪುಣ್ಯಕ್ಷೇತ್ರ ಹೊನ್ನಮ್ಮನ ಕೆರೆಗೆ ಶಾಸಕರಾದ ಡಾ.ಮಂತರ್ ಗೌಡ ಅವರು ಗೌರಿ ಹಬ್ಬ ದಿನವಾದ ಮಂಗಳವಾರ ಬಾಗಿನ ಅರ್ಪಿಸಿದರು. ಶ್ರೀ ಸಿದ್ದೇಶ್ವರ, ಬಸವೇಶ್ವರ ಹಾಗೂ ತಾಯಿ ಹೊನ್ನಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಶಾಸಕರಾದ ಡಾ.ಮಂತರ್ ಗೌಡ ಅವರು ಬಾಗಿನ ಅರ್ಪಿಸಿದರು.ಬಳಿಕ ಮಾತನಾಡಿದ ಶಾಸಕರು ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ದೇವಾಲಯಕ್ಕೆ ಪೂಜೆ ಸಲ್ಲಿಸಲು ಹಾಗೂ ತಾಯಿ ಹೊನ್ನಮ್ಮ ಕೆರೆಗೆ ಬಾಗಿನ ಸಮರ್ಪಿಸಲು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿ ವರ್ಷ ಭಕ್ತಾಧಿಗಳು ಆಗಮಿಸುವುದು ವಿಶೇಷ ಎಂದರು. ತಾಯಿ ಹೊನ್ನಮ್ಮನ ಕೆರೆಗೆ ನವ ದಂಪತಿಗಳು ಆಗಮಿಸಿ ವಿಶೇಷ ಪೂಜೆ ಸಲ್ಲಿಸಿಕೊಂಡು ಬರುತ್ತಾರೆ. ಗೌರಿ ಹಬ್ಬ ಆಚರಣೆಯಿಂದ ಕುಟುಂಬದವರೆಲ್ಲರ