ಮೊಳಕಾಲ್ಮುರು:- ಕೊಂಡ್ಲಹಳ್ಳಿ ಗ್ರಾಮದಲ್ಲಿ ಗುರುವಾರದಂದು ಮಾರಮ್ಮನ ಜಾತ್ರೆ ಅದ್ದೂರಿಯಾಗಿ ನಡೆಯಿತು. ಗ್ರಾಮದಲ್ಲಿರುವ ಮಾರಿ ಮಹೇಶ್ವರಿ ದೇವಸ್ಥಾನದಲ್ಲಿ ಬೆಳಿಗ್ಗೆಯಿಂದಲೇ ಪೂಜಾ ವಿಧಿ ವಿಧಾನಗಳು ನಡೆದವು. ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಪೂಜೆಯಲ್ಲಿ ಪಾಲ್ಗೊಂಡು ತಮ್ಮ ಹರಕೆ ಒಪ್ಪಿಸಿದರು. ಪ್ರತಿ ವರ್ಷ ಗೌರಸಮುದ್ರ ಮಾರಮ್ಮನ ಜಾತ್ರೆ ಸಿಡಿ ನಡೆದು ಮಾರನೇ ದಿನ ಗ್ರಾಮದಲ್ಲಿ ಅದ್ದೂರಿಯಾಗಿ ಮಾರಮ್ಮನ ಜಾತ್ರೆಗೆ ಚಾಲನೆ ನೀಡಲಾಗುತ್ತದೆ.