ಯಾದಗಿರಿ ಜಿಲ್ಲೆಯ ಸುರಪುರ ನಗರದ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ವೃತ್ತದ ಹಿಂಭಾಗದಲ್ಲಿರುವ ಸರ್ವೆ ನಂಬರ್ 7/1ರಲ್ಲಿನ ಖಾರಿಜ್ ಖಾತಾ ಎರಡು ಎಕರೆ 26 ಗುಂಟೆ ಭೂಮಿಯನ್ನು ಅಂಬೇಡ್ಕರ್ ಹೆಸರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮಂಜೂರು ಮಾಡುವಂತೆ ಆಗ್ರಹಿಸಿ ನೂರಾರು ಜನರಿಂದ ಪ್ರತಿಭಟನೆ ನಡೆಸಲಾಯಿತು. ಅಂಬೇಡ್ಕರ್ ವೃತ್ತದ ಮುಂಭಾಗದಲ್ಲಿ ರಸ್ತೆಯಲ್ಲಿ ಕುಳಿತು ಪ್ರತಿಭಟನೆಯನ್ನು ನಡೆಸಿದ ಮುಖಂಡರು, ತಹಸಿಲ್ದಾರರ ವಿರುದ್ಧ ಹಾಗೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.