ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ವತಿಯಿಂದ ಹುಬ್ಬಳ್ಳಿಯಲ್ಲಿ ಪಾಲಿಕೆಯ ಸಭಾಭವನದಲ್ಲಿ ಸಾಮಾನ್ಯ ಸಭೆ ಜರುಗಿತು. ಈ ವೇಳೆ ಅವಳಿ ನಗರದ ಸಮಗ್ರ ಅಭಿವೃದ್ಧಿ ಕುರಿತಂತೆ ಪಾಲಿಕೆ ಮೇಯರ್ ಜ್ಯೋತಿ ಪಾಟೀಲ್ ಅವರ ನೇತೃತ್ವದಲ್ಲಿ ಪಾಲಿಕೆಯ ಸದಸ್ಯರುಗಳು ಸಭೆ ನಡೆಸಿದರು. ಈ ವೇಳೆ ಪಾಲಿಕೆ ಆಯುಕ್ತರಾದ ರುದ್ರೇಶ ಘಾಳಿ, ಪಾಲಿಕೆ ಉಪಮೇಯರ್ ಸಂತೋಷ್ ಚವ್ಹಾನ್, ಪಾಲಿಕೆ ಸದಸ್ಯರುಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಉಪಸ್ಥಿತರಿದ್ದರು.