ವಿಜಯಪುರ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಹಬ್ಬದ ಪ್ರಯುಕ್ತವಾಗಿ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಶಾಂತಿ ಸುವ್ಯವಸ್ಥೆ ಕಾಪಡುವ ದೃಷ್ಟಿಯಿಂದ ಭಾನುವಾರ ಸಾಯಂಕಾಲ 6ಗಂಟೆ ಸುಮಾರಿಗೆ ರೌಡಿಶೀಟರ್ ಪರೇಡ್ ನಡೆಸಿದರು. ಈ ಸಂದರ್ಭದಲ್ಲಿ ರೌಡಿ ಶೀಟರ್ ಗಳು ಯಾವುದೇ ಅಹಿತಕರ ಘಟನೆಯಲ್ಲಿ ಭಾಗಿಯಾದರೆ ಅವರ ಬಾಲ ಕಟ್ ಮಾಡುತ್ತೇವೆ ಎಂದು ಖಡಕ್ ಎಚ್ಚರಿಕೆ ನೀಡಿದರು. ಈ ಸಂದರ್ಭದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.