ಹಾಸನ: ಹಾಸನ ತಾಲೂಕು ಸಾಲಗಾಮೆ ಹೋಬಳಿ ಬೊಮ್ಮೇನಹಳ್ಳಿ ಗ್ರಾಮದಲ್ಲಿ ಇಂದು 30 ಲಕ್ಷ ವೆಚ್ಚದ ಸಮುದಾಯ ಭವನ, 25 ಲಕ್ಷ ವೆಚ್ಚದ ಅಂಗನವಾಡಿ ಕಟ್ಟಡವನ್ನು ಶಾಸಕ ಸ್ವರೂಪ್ ಪ್ರಕಾಶ್ ಉದ್ಘಾಟಿಸಿದರು. ಸಂಭಂದಿಸಿದ ಇಲಾಖೆ ಅಧಿಕಾರಿಗಳು ಹಾಗೂ ಗ್ರಾಮದ ಮುಖಂಡರ ಸಮ್ಮುಖದಲ್ಲಿ ಕಟ್ಟಡ ಉದ್ಘಾಟನೆ ನಡೆಸಿದ ಶಾಸಕರನ್ನು ಗ್ರಾಮದ ಮಹಿಳೆಯರು ಆರತಿ ಎತ್ತಿ ಸ್ವಾಗತಿಸಿದರೆ, ಮುಖಂಡರು ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡು ಸನ್ಮಾನಿಸಿ ಗೌರವಿಸಿದರು. ಬಳಿಕ ಮಾತನಾಡಿದ ಶಾಸಕ ಸ್ವರೂಪ್ ಪ್ರಕಾಶ್, ಗ್ರಾಮದ ಜನರಿಗೆ ಶುಭ ಸಮಾರಂಭಗಳಿಗೆ ಸಮುದಾಯ ಬೇಕು ಎಂಬ ಬಹುದಿನಗಳ ಬೇಡಿಕೆ ಈಡೇರಿದೆ. ಗ್ರಾಮಸ್ಥರು ಇದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು