ತುಮಕೂರು ನಗರದ ರೈಲ್ವೆ ನಿಲ್ದಾಣ ರಸ್ತೆಯಲ್ಲಿ ಶ್ರೀ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರ ಬಾಲಕಿಯರ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ. ಪರಮೇಶ್ವರ್ ಶಂಕುಸ್ಥಾಪನೆ ನೆರವೇರಿಸಿದರು. ನಬಾರ್ಡ್ ಯೋಜನೆಯಡಿ 4 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಈ ನೂತನ ವಿದ್ಯಾರ್ಥಿನಿಲಯ ನಿರ್ಮಾಣಕ್ಕೆ ಮಂಗಳವಾರ ಬೆಳಿಗ್ಗೆ ಸುಮಾರು 11.30 ರ ಸಮಯದಲ್ಲಿ ಶಂಕುಸ್ಥಾಪನೆ ನೆರವೇರಿಸಿದರು. ನಂತರ ಮಾತನಾಡಿದ ಅವರು, ಕಟ್ಟಡ ನಿರ್ಮಾಣ ಕಾಮಗಾರಿ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಈ ಹಾಸ್ಟೆಲ್ ನಿರ್ಮಾಣ ಕಾರ್ಯವನ್ನು ನಿಗದಿತ ಸಮಯದೊಳಗೆ ಪೂರ್ಣಗೊಳಿಸಬೇಕು ಎಂದರು.