ರಾಯಚೂರು ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಬುಧವಾರ ಬೆಳಗ್ಗೆ ಸೈಬರ್ ವಂಚನೆ ಕುರಿತು ಜಾಗೃತಿ ಕಾರ್ಯಕ್ರಮ ನಡೆಯಿತು. ಪೊಲೀಸ್ ಇಲಾಖೆಯಿಂದ ನಡೆದ ಕಾರ್ಯಕ್ರಮದಲ್ಲಿ ರಾಯಚೂರು ನಗರದ ಸದರ ಬಜಾರ್ ಪೊಲೀಸ್ ಠಾಣೆಯ ಸಿಪಿಐ ಉಮೇಶ ಕಾಂಬಳೆ ಭಾಗವಹಿಸಿ ಸೈಬರ್ ವಂಚನೆಯ ಕುರಿತು ಹಾಗೂ ಸಾರ್ವಜನಿಕರು ವಹಿಸಬೇಕಾದ ಎಚ್ಚರಿಕೆಯ ಕುರಿತು ಜಾಗೃತಿ ಮೂಡಿಸಿದರು. ಯಾರಾದರೂ ಅನುಮಾನ ಆಸ್ಪದ ವ್ಯಕ್ತಿಗಳು ಕಂಡುಬಂದಲ್ಲಿ ಅಥವಾ ಅಧಿಕಾರಿಗಳು ಕಂಡುಬಂದಲ್ಲಿ ತಕ್ಷಣ ಪೊಲೀಸರಿಗೆ ಮಾಹಿತಿಯನ್ನು ನೀಡುವಂತೆ ತಿಳಿಸಿದರು. ಈ ಸಂದರ್ಭದಲ್ಲಿ ಅನೇಕ ಜನ ಅಧಿಕಾರಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.