ನಗರದಲ್ಲಿ ಅದ್ದೂರಿಯಾಗಿ ದ್ವಿತೀಯ ಚುಟುಕು ಸಾಹಿತ್ಯ ಸಮ್ಮೇಳನ ಜರಗಿತು. ಚುಟುಕು ಸಾಹಿತ್ಯ ಪರಿಷತ್ ಹಾಗೂ ಮೇಘ ಮೈತ್ರಿ ಕನ್ನಡ ಸಾಹಿತ್ಯ ಸಂಘ. ಇವರ ಸಂಯುಕ್ತ ಆಶ್ರಯದಲ್ಲಿ ದ್ವಿತೀಯ ಚುಟುಕು ಸಾಹಿತ್ಯ ಸಮ್ಮೇಳನ ನಗರದಲ್ಲಿ ಅದ್ದೂರಿಯಾಗಿ ಜರುಗಿತು. ನಗರದ ನ್ಯೂ ಎಕ್ಸ್ಪರ್ಟ್ ಕಾಲೇಜಿನಲ್ಲಿ ಕಾರ್ಯಕ್ರಮವನ್ನ ಶನಿವಾರ ಆಯೋಜನೆ ಮಾಡಲಾಗಿತ್ತು. ಕಾರ್ಯಕ್ರಮಕ್ಕೂ ಮೊದಲು ವಿವಿಧ ಜಾನಪದ ಕಲಾತಂಡಗಳ ಜೊತೆಗೆ ರಾಮನಗರದ ಪ್ರಮುಖರಸ್ತೆಗಳಲ್ಲಿ ಉದ್ದದ ಕನ್ನಡದ ಬಾವುಟವನ್ನು ಹಿಡಿದು ಮೆರವಣಿಗೆ ಮಾಡಲಾಯಿತು. ಈ ವೇಳೆ ಚುಟುಕು ಸಾಹಿತ್ಯ ಪರಿಷತ್ನ ಪದಾಧಿಕಾರಿಗಳು ಉಪಸ್ಥಿತರಿದ್ದರು.